ಧರ್ಮತ್ತಡ್ಕ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಹಮ್ಮಿಕೊಳ್ಳಲಾಯಿತು. ಶ್ರೀಮತಿ ಶಾರದಾ ಎಸ್ ಭಟ್ ಕಾಡಮನೆ, ಯೋಗದ ಮಹತ್ವವನ್ನು ತಿಳಿಸಿದರು.
ಯೋಗವು ಆರೋಗ್ಯವನ್ನು ವೃದ್ಧಿಸುತ್ತದೆ, ಯೋಗದಿಂದ ರೋಗ ದೂರ, ನಿತ್ಯ ಯೋಗಾಭ್ಯಾಸಿಗಳಾಗಿ ಎಂದರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿ "ಜಗತ್ತಿಗೆ ಯೋಗವು ಭಾರತದ ಕೊಡುಗೆಯಾಗಿದೆ" ಎಂದರು.
ಮುಖ್ಯೋಪಾಧ್ಯಾಯ ಇ.ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಶಿಕುಮಾರ್, ಶ್ರೀಮತಿ ಎನ್ ಗಂಗಮ್ಮ ಶುಭಾಶಂಸನೆಗೈದರು.
ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿವಪ್ರಸಾದ್ ಸಿ ಸ್ವಾಗತಿಸಿ, ಪ್ರಶಾಂತ ಹೊಳ್ಳ ಎನ್ ನಿರೂಪಿಸಿದರು, ಶಶಿಧರ ಕೆ ವಂದಿಸಿದರು. ನಂತರ ಯೋಗ ಶಿಕ್ಷಕಿ ಶ್ರೀಮತಿ ಶಾರದಾ ಕಾಡಮನೆ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

