ಗೋವಿಂದ ದಾಸ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Upayuktha
0


ಸುರತ್ಕಲ್: ಯೋಗವು ಭಾರತೀಯ ಪರಂಪರೆಯಲ್ಲಿ ಪ್ರಾಚೀನ ಕಾಲದಿಂದಲೂ ಬಳಕೆಯಲ್ಲಿದೆ. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಹೆಗ್ಗಳಿಕೆ ಭಾರತೀಯರದ್ದು. ಅನೇಕ ಸಾಧಕರು ಯೋಗಾಸನಗಳನ್ನು ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಂಡಿದ್ದರಿಂದ ತಮ್ಮ ಸಾಧನೆಯ ಗಮ್ಯವನ್ನು ತಲುಪಿದ್ದಾರೆ ಎಂದು ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಇಲ್ಲಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ಅಭಿಪ್ರಾಯ ಪಟ್ಟರು.


ಅವರು ಗೋವಿಂದ ದಾಸ ಕಾಲೇಜು, ಸುರತ್ಕಲ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಎನ್.ಸಿ.ಸಿ. ಆರ್ಮಿ ವಿಂಗ್ ಮತ್ತು ಕ್ರೀಡಾ ಸಂಘಗಳ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.


ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯೊಂದಿಗೆ ಕಲಿಕೆಗೆ ಸಹಾಯಕವಾದ ಅಂಶಗಳಾದ ಏಕಾಗ್ರತೆ, ದೃಢತೆ ಮತ್ತು ನೆನಪಿನ ಶಕ್ತಿಗಳ ಹೆಚ್ಚಳವಾಗುತ್ತದೆ. ಅನೇಕ ಅನಾರೋಗ್ಯ ಸಮಸ್ಯೆಗಳನ್ನು ಯೋಗಾಸನಗಳ ಮುಖಾಂತರ ಗುಣಪಡಿಸಬಹುದು ಎಂದರು.


ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಬಾರಿಗೆ ಭಾಗವಹಿಸಿದ ವಿದ್ಯಾರ್ಥಿನಿ ಮೋಕ್ಷ ಎನ್. ಅಮೀನ್ ಅವರನ್ನು ಅಭಿನಂದಿಸಲಾಯಿತು.


ಎನ್.ಸಿ.ಸಿ ಅಧಿಕಾರಿ ಕ್ಯಾಪ್ಟನ್. ಡಾ. ಸುಧಾ ಯು ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ಅಕ್ಷತಾ ವಿ. ವಂದಿಸಿದರು.


ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ., ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಭಾಗ್ಯಲಕ್ಷ್ಮೀ, ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಾಧಿಕಾರಿ ಮೃದುಲಾ, ಗ್ರಂಥಪಾಲಕಿ ಡಾ. ಸುಜಾತ ಬಿ., ಪ್ರಾಧ್ಯಾಪಕ ಕುಮಾರ ಮಾದರ, ಉಪನ್ಯಾಸಕಿ ಕ್ಯಾರೋಲೀನ್ ವೆನಿಸ್ಸಾ ಪಿಂಟೋ, ಲಲಿತಕಲಾ ಸಂಘದ ಸಂಯೋಜಕ ವಿನೋದ್ ಶೆಟ್ಟಿ ಉಪಸ್ಥಿತರಿದ್ದರು.


ಮೋಕ್ಷಾ ಎನ್. ಅಮೀನ್ ಯೋಗಾಸನಗಳ ಪ್ರಾತ್ಯಕ್ಷತೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top