ಕೆನರಾ ವಿಕಾಸ್ ಸಮೂಹ ಸಂಸ್ಥೆ ಆವರಣದಲ್ಲಿ ಅಂ.ರಾ ಯೋಗ ದಿನಾಚರಣೆ

Upayuktha
0


ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು (ಜೂ.21) ಕ್ರೀಡಾ ಭಾರತಿ ಸಹಯೋಗದೊಂದಿಗೆ ಆಚರಿಸಲಾಯಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಸಂಯೋಜಕ ಬಸ್ತಿ ಪುರುಷೋತ್ತಮ ಶೆಣೈ ಅವರು ಇಂದಿನ ಯುವ ಜನತೆಗೆ ಯೋಗದ ಅನಿವಾರ್ಯತೆಯ ಕುರಿತು ಮಾತನಾಡುತ್ತಾ, ಯೋಗದ ಮೂಲ ಹಾಗೂ ದೇಹ ಮತ್ತು ಮನಸ್ಸುಗಳನ್ನು ಒಂದುಗೂಡಿಸುವಲ್ಲಿ ಯೋಗದ ಪಾತ್ರವನ್ನು ವಿವರಿಸಿದರು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ರೀಡಾ ಭಾರತಿ ಮಂಗಳೂರು, ಇದರ ಅಧ್ಯಕ್ಷರಾದ ಕರಿಯಪ್ಪ ರೈ ಮಾತನಾಡುತ್ತಾ, ಕಳೆದ ಕೆಲವು ವರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಯೋಗ ತನ್ನದೇ ಆದ ಮಹತ್ವವನ್ನು ಪಡೆಯುತ್ತಿದೆ, ಯೋಗದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಂಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.


ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಐಶ್ವರ್ಯ ಕೆ., ಕೆನರಾ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸುಗುಣ ನಾಯಕ್ ಉಪಸ್ಥಿತರಿದ್ದರು. ಶ್ರೀಮತಿ ನೀನಾ ಪೈ, ಶ್ರೀಯುತ ಸಂತೋಷ್ ಶೆಟ್ಟಿ ಯೋಗ ಅವಧಿಯನ್ನು ನೆರವೇರಿಸಿದರು. ಕ್ರೀಡಾ ಭಾರತಿ ಮಂಗಳೂರು, ಇದರ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ತಾರೆಮಾರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಇದರ ಸದುಪಯೋಗ ಪಡೆದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top