ಕಲ್ಬುರ್ಗಿ: ಸಂತ ಜೋಸೆಫ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶು ಪಾಲರಾಗಿದ್ದ ಹಿರಿಯ ಸಾಹಿತಿ ಜಾನಪದ ವಿದ್ವಾಂಸ ಡಾ. ಚಿ.ಸಿ ನಿಂಗಣ್ಣ ಪ್ರಾಂಶುಪಾಲರ ಹುದ್ದೆಗೆ ಭಡ್ತಿ ಹೊಂದಿದ್ದು ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ವೆಂಕಟೇಶ್ ಕಡೇಚೂರ್ ಸೇರಿದಂತೆ ಗಣ್ಯರ ಅಭಿನಂದನೆ ಸಲ್ಲಿಸಿದ್ದಾರೆ.
ಸಂತ ಜೋಸೆಫ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕಳೆದ 16 ವರ್ಷಗಳಿಂದ ಉಪ ಪ್ರಾಂಶುಪಾಲರಾಗಿ ತೃತೀಯ ಸೇವೆ ಸಲ್ಲಿಸಿದ ಡಾ. ನಿಂಗಣ್ಣ ಅವರಿಗೆ ಕಾಲೇಜಿನ ಪ್ರಾಂಶುಪಾಲರಾಗಿ ಇತ್ತೀಚೆಗೆ ಭಡ್ತಿ ನೀಡಲಾಗಿತ್ತು. ನಿಂಗಣ್ಣ ಅವರು ಕಲ್ಬುರ್ಗಿ ಹಾಗಾದರೆ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು ಇವರು ಸುಮಾರು 40ರಷ್ಟು ಕೃತಿಗಳನ್ನು ಹೊರ ತಂದಿದ್ದಾರೆ. ಕಲಬುರಗಿ ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದಾರೆ.
ಗುಲ್ಬರ್ಗ ವಿಶ್ವವಿದ್ಯಾಲಯದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಿಂಗಣ್ಣ ಪ್ರಾಂಶುಪಾಲ ಹುದ್ದೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ವೆಂಕಟೇಶ್ ಕಡೇಚೂರ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಲ್ಬುರ್ಗಿ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ, ಉದ್ಯಮಿ ಬಸವರಾಜ್ ಕುಪೇಂದ್ರ ಗುತ್ತೇದಾರ್ ಹಾಗೂ ಕಲ್ಬುರ್ಗಿ ಪೊಲೀಸ್ ಆಯುಕ್ತರ ಕಚೇರಿಯ ಆಪ್ತ ಸಹಾಯಕರಾದ ವಿಶ್ವರಾಜ್ ಕೌಂಟೆ ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


