ಮಂಗಳೂರು: ಮೋದಿ ಸರಕಾರದ ಮೂರನೇ ಅವಧಿಯ ಮೊದಲ ಕಾರ್ಯವಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತನ್ನು ನೇರ ವರ್ಗಾವಣೆ ಮೂಲಕ ಬಿಡುಗಡೆಗೊಳಿಸುವ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಯೋಜನೆಯಿಂದ 9.26 ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ 20 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ಸನ್ನು ಕಂಡ ಕೃಷಿಕರಾದ ಚಂದ್ರಶೇಖರ ಗಟ್ಟಿ, ದಯಾನಂದ ಕುಲಾಲ್ ಮತ್ತು ಕೆನ್ಯೂಟ್ ಅರಾಹ್ನ ಅವರನ್ನು ಅಭಿನಂದಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

