ಗುರುಕುಲ ಪ.ಪೂ.ಕಾಲೇಜು ವಕ್ವಾಡಿ: ಓರಿಯಂಟೇಶನ್ ಕಾರ್ಯಕ್ರಮ

Upayuktha
0


ಕುಂದಾಪುರ: ವಕ್ವಾಡಿ ಗುರುಕುಲ ಪದವಿಪೂರ್ವ ವಿಭಾಗಕ್ಕೆ ಈ ಶೈಕ್ಷಣಿಕ ವರುಷದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ಎಂಜಿಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರ ನಾಥ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾದ ಅಧ್ಯಯನ ಕ್ರಮದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಯಾವ ರೀತಿಯಲ್ಲಿ ಭಾಗವಹಿಸಬೇಕು ಅನ್ನುವುದರ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಗುರುಕುಲ ವಿದ್ಯಾ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಅನುಪಮ ಎಸ್ ಶೆಟ್ಟಿ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಶೈಕ್ಷಣಿಕ ವಿಭಾಗದ "ಅರಿವು"ಸಂಸ್ಥೆಯ ಸಿ.ಇ.ಒ. ಸುಜೀತ್ ಕೊಯೊಟ್ ಹಾಗೂ ಅರಿವು ವಿಭಾಗದ ಆಡಳಿತ ಕಚೇರಿಯ ರಂಜಿತ್ ಕೇೂಟ್ಯಾನ್ ಅರಿವು ಸಂಸ್ಥೆಯ ಮುಂದಿನ ಯೇೂಜನೆಗಳ ಕುರಿತಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿಕಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top