ಭಾರತದ ಅಮೃತ ಕಾಲಕ್ಕೆ ಬೇಕಾದ ವ್ಯಕ್ತಿಗಳು ರಾಮಕೃಷ್ಣ ವಿದ್ಯಾದೇಗುಲದಿಂದ ಮೂಡಿಬರಲಿ: ಸಂಸದ ಬ್ರಿಜೇಶ್ ಚೌಟ

Upayuktha
0


ಮಂಗಳೂರು: ಗುರುಕುಲ ಮಾದರಿಯಲ್ಲಿ ಹಾಗೂ ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರ ಈ ಮಹತ್ತರವಾದ ಪ್ರಯತ್ನವು ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಪೂರಕವಾಗಿದೆ ಎಂದು‌ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.


ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ವತಿಯಿಂದ ಪಲ್ಲಿಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ “ರಾಮಕೃಷ್ಣ ವಿದ್ಯಾದೇಗುಲ” ನೂತನ ಶಿಕ್ಷಣ ಸಂಸ್ಥೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ರಾಮಕೃಷ್ಣ ಮಠದ ಅನುಯಾಯಿಯಾದ ನಾನು ಮುಂದಿನ ಕಾರ್ಯಯೋಜನೆಗೆ  ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ವಿನಯ್ ಹೆಗ್ಡೆ, ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್, ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಸಚಿವರಾದ ರಮಾನಾಥ್ ರೈ, ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top