ಕಾವೂರು: ಬಕ್ರೀದ್ ಬಂದರೆ ಗೋ ಸಾಕಾಣಿಕೆ ಮಾಡಿ ಜೀವನ ನಡೆಸುವವರು ಆತಂಕಗೊಳ್ಳುವ ಸ್ಥಿತಿಯಿದ್ದು, ಗೋ ಹತ್ಯೆ ನಿಷೇಧ ಕಟ್ಟು ನಿಟ್ಟಾಗಿ ಜಾರಿ ಮಾಡಬೇಕು. ಅಕ್ರಮವಾಗಿ ಕದ್ದು ತಂದ ಗೋವು ಕಡಿಯುವುದು ಕಂಡು ಬಂದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959, ಜತೆಗೆ ಬಿಜೆಪಿ ಸರಕಾರ ಮಾಡಿದ ಬಿಗಿ ಕಾನೂನು ಈಗಾಗಲೇ ಜಾರಿಯಲ್ಲಿದೆ. ಕುರ್ಬಾನಿ ನೆಪದಲ್ಲಿ ಅಕ್ರಮವಾಗಿ ದನ ಸಾಗಾಟ, ಹತ್ಯೆ ವಿರುದ್ಧಗಸ್ತು ಹೆಚ್ಚಿಸಬೇಕು. ನಾಕಾ ಬಂದಿ ನಡೆಸಬೇಕು. ಪೊಲೀಸ್ ಇಲಾಖೆ ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ಸಂದೇಶ ರವಾನಿಸಬೇಕು. ಈ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ, ಹೈನುಗಾರರಿಗೆ ನಷ್ಟವಾಗದಂತೆ ಎಚ್ಚರವಹಿಸಬೇಕು. ಶಾಂತಿ ಸೌಹಾರ್ದತೆ ಬಗ್ಗೆ ಮಾತನಾಡುವ ಈಗಿನ ಸರಕಾರ ಈ ಬಗ್ಗೆ ಸೂಕ್ತ ಕ್ರಮಗೊಳ್ಳುತ್ತದೆ ಎಂದು ಭಾವಿಸಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ