ಭಾನುಪ್ರಕಾಶ್ ನಿಧನಕ್ಕೆ ಶಾಸಕ ಕಾಮತ್ ಸಂತಾಪ

Upayuktha
0


ಮಂಗಳೂರು: ಬಿಜೆಪಿ ಹಿರಿಯ ನಾಯಕರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್ ಅವರ ಅಗಲಿಕೆಗೆ ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.


ಶಿವಮೊಗ್ಗ ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ತಮ್ಮ ಸರಳ ವ್ಯಕ್ತಿತ್ವದಿಂದಲೇ ಎಲ್ಲರ ಅಚ್ಚುಮೆಚ್ಚಿನ ನಾಯಕರಾಗಿದ್ದರು. ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ, ಬಂಧು-ಮಿತ್ರರು ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ನೀಡಲಿ ಹಾಗೂ ದಿವ್ಯಾತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದರು.


Post a Comment

0 Comments
Post a Comment (0)
To Top