ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಕಂಪನಿಗಳು ಹಾಗೂ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳ ಜೊತೆಗೆ ಒಡಂಬಡಿಕೆಯನ್ನು ಮಾಡುವುದರ ಪೂರ್ವಭಾವಿಯಾಗಿ ಜೂನ್ 12 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಸಾಂಕೇತಿಕವಾಗಿ ಒಪ್ಪಂದ ಮಾಡಿಕೊಳ್ಳುವ ಕಾರ್ಯಕ್ರಮ ಜರುಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೇರು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ದಿನಕರ ಅಡಿಗ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ.ಗೌರವ ಉಪಸ್ಥಿತಿಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ವಹಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಉಪಸ್ಥಿತಿಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಐಸಿಎಆರ್, ಸರಸ್ವತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್,ಇಕೋ ಬ್ಲಿಸ್, ಸರ್ವಜ್ಞ ಇನ್ಫೋಟೆಕ್,ದಿ ವೆಬ್ ಪೀಪಲ್,ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರು, ಎಸ್ ಡಿಎಂ ಶಿಕ್ಷಣ ಸಂಸ್ಥೆ, ಚೆಸ್ ಅಸೋಸಿಯೇಷನ್,ಗಾನ ನೃತ್ಯ ಅಕಾಡೆಮಿ ಮಂಗಳೂರು,ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು, ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು, ಶಾರದಾ ಕಲಾ ಕೇಂದ್ರ ಟ್ರಸ್ಟ್ ಪುತ್ತೂರು, ಸುನಾದ ಸಂಗೀತ ಕಲಾ ಶಾಲೆ ಪುತ್ತೂರು, ವಾರಣಾಶಿ ಅಭಿವೃದ್ಧಿ ಹಾಗೂ ಸಂಶೋಧನಾ ಫೌಂಡೇಶನ್ ಪಾಲ್ಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ