ಪೆಟ್ರೋಲ್, ಡೀಸೆಲ್‌ ದರ ಏರಿಸಿ ಜನರಿಗೆ ಬರೆ ಎಳೆದ ಕಾಂಗ್ರೆಸ್‌ ಸರ್ಕಾರ: ಸಂಸದ ಬ್ರಿಜೇಶ್ ಚೌಟ

Upayuktha
0

ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು  ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.


ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ ಎಂದರು.


ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದ್ದು, ಒಮ್ಮೆಲೇ ಅತೀ  ಹೆಚ್ಚು ಮಾರಾಟ ತೆರಿಗೆ ಇದಾಗಿದೆ, ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್‌ ದರ ಏರಿಸಿರುವ ಕ್ರಮ ಖಂಡನೀಯ ಎಂದರು.  


ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್‌ ದರವನ್ನು ಇಳಿಕೆ‌ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top