ಗೋಡೆ ಕುಸಿದು ನಾಲ್ವರ ಸಾವು: ವಿಕೋಪ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಸದ ಚೌಟ ಸೂಚನೆ

Upayuktha
0


ಮಂಗಳೂರು: ಕುತ್ತಾರಿನಲ್ಲಿ ಬುಧವಾರ ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ಗತಿ ಕೋರುವುದಾಗಿ ತಿಳಿಸಿದ್ದಾರೆ.


"ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ".


ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ ಮೀನುಗಾರರು, ನದಿ ಪಾತ್ರದ ಜನರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರ ವಹಿಸುವಂತೆ ವಿನಂತಿಸುತ್ತೇನೆ ಎಂದು ಸಂಸದರು ತಿಳಿಸಿದ್ದಾರೆ.


ಪ್ರಾಕೃತಿಕ ವಿಕೋಪದ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುವುದಾಗಿಯೂ ಅವರು ಹೇಳಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top