ಗೊರೂರು ರಾಮಸ್ವಾಮಿ ಅಯ್ಯಂಗಾರ್ ಪ್ರಶಸ್ತಿಗೆ ಮಧು ನಾಯಕ್ ಲಂಬಾಣಿ ಆಯ್ಕೆ

Upayuktha
0

ಹಾಸನ: ರಾಜ್ಯ ಬರಹಗಾರ ಸಂಘದ ರಾಜ್ಯಾಧ್ಯಕ್ಷ ಮಧು ನಾಯಕ್ ಲಂಬಾಣಿರವರು ಜುಲೈ 07 ರಂದು ನಡೆಯಲಿರುವ ಡಾ. ಗೊರೂರರ 120ನೇ ಜನ್ಮ ಜಯಂತೋತ್ಸವ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ, ಚಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕ, ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ಭವನ ಬೆಂಗಳೂರು ಇವರ ಸಹಕಾರದೊಂದಿಗೆ ಗೊರೂರಿನಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುಂದರೇಶ್ ಡಿ ಉಡುವಾರೆ ತಿಳಿಸಿದ್ದಾರೆ.


ಮಧು ನಾಯಕ್ ಲಂಬಾಣಿ ಅವರು ಬಡ್ತಿ ಮುಖ್ಯ ಶಿಕ್ಷಕರಾಗಿದ್ದು ಸಾಹಿತಿಗಳಾಗಿ ಬರಹಗಾರರಾಗಿ 21 ಕೃತಿಗಳನ್ನು ರಚಿಸಿದ್ದಾರೆ. ರಾಜ್ಯಮಟ್ಟದ ಬರಹಗಾರರ ಸಂಘಟನೆಯನ್ನು ನಿರಂತರವಾಗಿ ಮುಂದುವರಿಸುತ್ತಿದ್ದು ನೂರಾರು ಗೋಷ್ಠಿಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಪ್ರತಿವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇವರ ನಿಸ್ವಾರ್ಥ ಕನ್ನಡ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಇವರಿಗೆ ಪ್ರಶಸ್ತಿ ಲಭಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top