ಮಂಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ (ರಿ) ಮೈಸೂರು ನೀಡುವ ರಾಜ್ಯ ವಿಭೂಷಣ ಪ್ರಶಸ್ತಿಗೆ 2024 ಕ್ಕೆ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ, ಸಮಾಜ ಸೇವಕಿ, ಸಂಘಟಕಿ, ಮಾಲತಿ ಶೆಟ್ಟಿ ಮಾಣೂರು ಆಯ್ಕೆ ಆಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ವಿಜಯನಗರ ಮೈಸೂರಿನಲ್ಲಿ ನಡೆಯಲಿದೆ ಕಾರ್ಯಕ್ರಮದಲ್ಲಿ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ದತ್ತಪೀಠ ಮೈಸೂರು ಇವರು ಆಶಿರ್ವಚನ ನೀಡಲ್ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಮಹಾರಾಜರಾದ ಶ್ರೀ ಯದುವೀರ ಒಡೆಯರ್, ಶಾಸಕ ಹರೀಶ್ ಗೌಡ, ಆಯೋಧ್ಯೆ ಶ್ರೀರಾಮ ಮೂರ್ತಿ ಕೆತ್ತನೆ ಮಾಡಿದ ಶಿಲ್ಪಿ ಅರುಣ್ ಯೋಗಿರಾಜ್ ಮೈಸೂರು, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಗೋಪಾಲ್, ಬೆಂಗಳೂರಿನ ಡಾ. ಅನ್ನು ಅರ್ ಅಮ್ಮ, ಮೈಸೂರು ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಉಪಸ್ಥಿತರು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಲತಿ ಶೆಟ್ಟಿ ಮಾಣೂರು ಅವರು ಕಳೆದ 18 ವರ್ಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, 11 ವರುಷಗಳಿಂದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ.
9 ಕೃತಿಗಳನ್ನು ಬರೆದಿದ್ದಾರೆ. ಹಿರಿಯ ಕಿರಿಯ ಸಾಹಿತಿಗಳ 40 ಕೃತಿಗಳನ್ನು ಈಗಾಗಲೇ ಅಮೃತ ಪ್ರಕಾಶ ಸರಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿ ದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತವಾಗಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಈಗಾಗಲೇ 100ಕ್ಕೂ ಅಧಿಕ ಮಾಡಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯಪ್ರಕಾಶ ಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ, ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ