ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ 8ನೇ ಕಾಲೇಜು ವಾರ್ಷಿಕೋತ್ಸವ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನೆರವೇರಿತು. ಡಾ.ದುರ್ಗಾಪ್ರಸಾದ್ ಎಂ. ಆರ್., ವೈದ್ಯಕೀಯ ಅಧೀಕ್ಷಕರು, ಲೇಡಿಗೋಷನ್ ಸರಕಾರಿ ಆಸ್ಪತ್ರೆ, ಮಂಗಳೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ, " ಧನಾತ್ಮಕ ಆಲೋಚನೆಗಳು ಮನುಷ್ಯನ ಏಳಿಗೆಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಗೆ ಬರಬೇಕು. ಜೀವನದಲ್ಲಿ ಸಾಧಿಸಬೇಕಾದರೆ ಧೃತಿಗೆಡದೆ ಬಂದಂತ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಸ್ಥಿತಪ್ರಜ್ಞೆಯಿಂದ ಸವಾಲುಗಳನ್ನು ಎದುರಿಸಿದರೆ ಜೀವನದ ಅಭ್ಯುದಯ ಸಾಧ್ಯ" ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ಲಕ್ಷೀದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ. ಮಾಧವ ಎಂ. ಕೆ., ಉಪನಿರ್ದೇಶಕರು, ವಿದ್ಯಾರ್ಥಿ ಸಂಘ ಹಾಗೂ ಸಂಯೋಜಕರು ಎಂ. ಎ. ತುಳು ವಿಭಾಗ, ಡಾ. ಯತೀಶ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಕಗಳು ಹಾಗೂ ಸಂಯೋಜಕರು ಎಂ. ಕಾಂ. ಮತ್ತು ಎಂ.ಬಿ.ಎ (ಐಬಿ) ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿಶಾಂತ್, ಕಾರ್ಯದರ್ಶಿ ನಂದಿತಾ, ಸಹ ಕಾರ್ಯದರ್ಶಿ ಕೆ. ಆರ್. ಆದಿತ್ಯ, ಲಲಿತಾ ಕಲಾ ಸಂಘದ ಕಾರ್ಯದರ್ಶಿ ಚೇತನ್ ಕುಮಾರ್, ಜೊತೆ ಕಾರ್ಯದರ್ಶಿ ಜಿತೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಕಾಲೇಜಿನ ವಾರ್ಷಿಕ ಸಂಚಿಕೆ "ಮಂಗಳ ಸಂಧ್ಯಾ" ಬಿಡುಗಡೆಗೊಳಿಸಿದರು.
ಕನ್ನಡ ಉಪನ್ಯಾಸಕಿ ಆಶಾಲತಾ ನಿರೂಪಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ಡಾ. ತೆಜೇಶ್ವರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಆನಂದ್ ಅತಿಥಿ ಪರಿಚಯ ಮಾಡಿದರು. ಸಾಂಸ್ಕೃತಿಕ ಸ್ಪರ್ಧಾ ವಿಜೇತರ ಪಟ್ಟಿಯನ್ನು ಡಾ.ರಂಜಿತಾ ಓದಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ