ಕಾಂತಾವರ: ಕಳೆದ ನಲುವತ್ತೈದು ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂಪಾಯಿ ಹತ್ತುಸಾವಿರ (10000/-) ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ kannadasanghakanthavara@gmail.com ಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. ಇಲ್ಲವೇ ಅಧ್ಯಕ್ಷರನ್ನು (9900701666) ಅಥವಾ ಪ್ರಧಾನ ಕಾರ್ಯದರ್ಶಿ ಅವರನ್ನು (9008978366) ಮೇಲಿನ ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ ಸಪ್ಟಂಬರ 15. ಪ್ರಶಸ್ತಿ ಘೋಷಣೆ ನವಂಬರ 1 ಎಂದು ಕನ್ನಡ ಸಂಘದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ