ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ: ಸಚಿವ ಕೆ.ಜೆ.ಜಾರ್ಜ್

Upayuktha
0

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಭೇಟಿ: ಅಧಿಕಾರಿಗಳೊಂದಿಗೆ ಸಮಾಲೋಚನೆ



ಚಿಕ್ಕಮಗಳೂರು: ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು.


ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು  ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು  ಚರ್ಚಿಸಿದರು.


ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.


ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, "ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ" ಎಂದು ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top