ಮ೦ಗಳೂರು: ಮೆಸ್ಕಾಂ ವ್ಯಾಪ್ತಿಯ ಪುತ್ತೂರು ನಗರ ಮತ್ತು ಪುತ್ತೂರು ಗ್ರಾಮಾಂತರ ಉಪವಿಭಾಗಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆಯು ಪುತ್ತೂರು ಗ್ರಾಮಾಂತರ ಉಪವಿಭಾಗ ಕಚೇರಿಯಲ್ಲಿ ಜೂ.19ರ೦ದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ನಡೆಯಲಿದೆ.
ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ. ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08251-285393.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ