ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ 3000ಕ್ಕೂ ಅಧಿಕ ಗಿಡಗಳ ವಿತರಣೆ

Upayuktha
0

ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ




ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್‌ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮವನ್ನು ಇಂದು (ಜೂ.5) ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿ ಗಿಡ ನೆಡಲಾಯಿತು.


ಮುಳಿಯ ಜ್ಯುವೆಲ್ಸ್ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕರು ಹಾಗೂ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.


ಮುಳಿಯ ಜ್ಯುವೆಲ್ಸ್‌ ಸಿಬ್ಬಂದಿಗಳೆಲ್ಲ ಸೇರಿ ಮುಳಿಯ ಫಾರ್ಮ್ ಲ್ಯಾಂಡ್‌ನಲ್ಲಿ ಗಿಡಗಳನ್ನು ನೆಟ್ಟರು. ಈ ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ಭಾಗವಹಿಸಿದ್ದರು.


ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನೆರವೇರಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ 3,000ಕ್ಕೂ ಅಧಿಕ  ಗಿಡಗಳನ್ನು ವಿತರಿಸಲಾಯಿತು.


ಮುಳಿಯ ಜ್ಯುವೆಲ್ಸ್ ಸಂಸ್ಥೆ ಕೇವಲ ಚಿನ್ನಾಭರಣಗಳ ಮಾರಾಟದಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ, ಬದಲಾಗಿ ಮುಳಿಯ ಫೌಂಡೇಶನ್, ಮುಳಿಯ ಪ್ರಾಪರ್ಟೀಸ್‌ನಂತಹ ಸಂಸ್ಥೆಗಳ ಮೂಲಕ ಸಾರ್ವಜನಿಕ ಕಾಳಜಿಯ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಈ ಕಾರ್ಯಕ್ರಮಗಳ ಸಾಲಿನಲ್ಲಿ ವೃಕ್ಷಾರೋಪಣವೂ ಸೇರಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top