ಕ್ರಿಯಾತ್ಮಕ ಚಟುವಟಿಕೆಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಬುನಾದಿ: ಅವನೀಶ್ ಪಿ

Upayuktha
0


ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯ ನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ, ವೈಯುಕ್ತಿಕ ಸ್ವಚ್ಛತೆ, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ರಾ. ಸೇ. ಯೋಜನೆ ಸಹಾಯಕವಾಗಿದೆ. ಒಟ್ಟಾರೆ ಸಾಮಾಜಿಕ ಸಾಮರಸ್ಯ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಗೆ ಇದು ಬುನಾದಿಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ರಾ.ಸೇ.ಯೋಜನೆಯ ಪೂರ್ವ ಯೋಜನಾಧಿಕಾರಿ ಅವನೀಶ್. ಪಿ. ಹೇಳಿದರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಪ್ರಶಿಕ್ಷಣ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 


ಈ ಸಂದರ್ಭದಲ್ಲಿ ಸ್ವಯಂ ಸೇವಕರು ರಚಿಸಿದ ಭಿತ್ತಿಪತ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.  ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು. ಶಶಾಂಕ್ ಸ್ವಾಗತಿಸಿ, ಅಪರ್ಣಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top