ಬೆಳ್ತಂಗಡಿ: ನಡ ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.
ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ನಾವು ಅವಕಾಶವನ್ನು ನೀಡುತ್ತೇವೆ. ಇದರ ಸದುಪಯೋಗ ಪಡೆದುಕೊಂಡು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಅವರು ಕರೆ ನೀಡಿದರು.
ಎಲ್ಲಾ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಸ್ಥೆಯ ಶಿಸ್ತು ಹಾಗೂ ನಿಯಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 90ಕ್ಕಿಂತ ಅಧಿಕ ಅಂಕ ಗಳಿಸಿದ 9 ಮಂದಿ ವಿದ್ಯಾರ್ಥಿಗಳಿಗೆ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಇವರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ವೈ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ವಿಜೇತ್ ಸ್ವಾಗತಿಸಿ, ಫಾತಿಮತುಲ್ ರಸೀನಾ ವಂದಿಸಿದಳು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ