ಮಂಗಳೂರು: ಪ್ರಜಾಪ್ರಭುತ್ವ ಮಾದರಿ ವ್ಯವಸ್ಥೆಯಲ್ಲಿ ಜಗತ್ತಿನಲ್ಲಿ ಅತೀ ದೊಡ್ಡ ರಾಷ್ಟ್ರ ಭಾರತ. ಚುನಾವಣೆಯಲ್ಲಿ ಮೂರನೇ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಯವರ ಪ್ರಮಾಣ ವಚನ ಸಮಾರಂಭವು ನಾಳೆ (ಜೂ. 09) ಸಂಜೆ 07.15 ಕ್ಕೆ ನವದೆಹಲಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮವು ಬಿಜೆಪಿಯ ಹಬ್ಬದ ವಾತಾವರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀ ಬೂತ್‌ನಲ್ಲಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಕೆಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಕರೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿ ಪ್ರಮುಖರ ಸಭೆಯಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಗಳಿಸಿರುವ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀಯವರು ಸತತ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಮೇತ ಜಿಲ್ಲಾದ್ಯಂತ ವಿಜಯೋತ್ಸವ ಆಚರಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರು, ಕಾರ್ಯಕರ್ತರು, ಬಂಧುಗಳು, ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಜೆ 06.30 ಗಂಟೆಯಿಂದ ನೇರ ಪ್ರಸಾರದ ಮೂಲಕ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ