ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಡಾ ಭರತ್ ಶೆಟ್ಟಿ ಟೀಕೆ

Upayuktha
0


ಕಾವೂರು: ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ. ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.


ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಈಗಾಗಲೇ ಆಸ್ತಿ ತೆರಿಗೆ, ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top