ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು ಮತ್ತು ಎರಡು ಇದರ ಸಹಯೋಗದಿಂದ ಜೂನ್ 5 2024 ರಂದು ಪರಿಸರ ದಿನವನ್ನು ಆಚರಿಸಲಾಯಿತು. ಎಲ್ಲಾ ಸ್ವಯಂಸೇವಕರಿಗೆ ಗಿಡಗಳನ್ನು ಹಸ್ತಾಂತರಿಸಲಾಯಿತು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂಸೇವಕರುಗಳು ಮತ್ತು ಪದಾಧಿಕಾರಿಗಳು ಸೇರಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಯಶಸ್ವಿಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಾಧವ ಎಂ ಈ ದಿನವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂಸೇವಕರು ಪದಾಧಿಕಾರಿಗಳು ಯೋಜನಾಧಿಕಾರಿಗಳಾದ ಪ್ರೊ. ಸಂತೋಷ್ ಪ್ರಭು, ಪ್ರೊ. ಚಿತ್ರಾ ಪಡಿಯಾರ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಜೊತೆಗೆ ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

