ರೇಡಿಯೊ ಮಣಿಪಾಲದಲ್ಲಿ ಇಂದು ವಿದ್ಯಾರ್ಥಿ ಶಿಕ್ಷಕರಿಂದ ಕಾರ್ಯಕ್ರಮ ವೈವಿಧ್ಯ

Upayuktha
0


ಮಣಿಪಾಲ: ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ವೈವಿಧ್ಯಮಯ ಕಾರ್ಯಕ್ರಮ ಪ್ರಸಾರವಾಗಲಿದೆ. 


ಡಾ.ಟಿ.ಎಂ.ಎ ಪೈ ಶಿಕ್ಷಣ ಕಾಲೇಜು, ಉಡುಪಿ ಇಲ್ಲಿನ  ವಿದ್ಯಾರ್ಥಿಶಿಕ್ಷಕರು ಸಂಸ್ಥೆಯ ಸಮನ್ವಯಾಧಿಕಾರಿ ಡಾ.ಮಹಾಬಲೇಶ್ವರ ರಾವ್ ಅವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.


ಇದು ಜೂನ್ 21ರಂದು ಶುಕ್ರವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ 22ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.


ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top