ನಿವೃತ್ತ ಯೋಧ ಅನೀಶ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಉಜಿರೆ: ಮೂಲತಃ ಧರ್ಮಸ್ಥಳದ ನಿವಾಸಿಯಾದ ಅನೀಶ್ ಭೂಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಸೋಮವಾರ ಹುಟ್ಟೂರಿಗೆ ಬಂದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಬೆಳ್ತಂಗಡಿಯಿಂದ ಧರ್ಮಸ್ಥಳದ ವರೆಗೆ ಅವರನ್ನು ವಾಹನ ಜಾಥಾದಲ್ಲಿ ಕರೆತರಲಾಯಿತು. ಬಳಿಕ ಅನೀಶ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಅವರ ಪತ್ನಿ ಸೌಮ್ಯ, ಮಗಳು ಆಂಬಿಯಾ ಮತ್ತು ಮಗ ಅನ್ವಿನ್ ಜೊತೆಗಿದ್ದರು. ಅನೀಶ್ ಮುಂದೆ ಕೃಷಿ ಕಾಯಕದಲ್ಲಿ ತೊಡಗಿ ಕುಟುಂಬದವರೊಂದಿಗೆ ಧರ್ಮಸ್ಥಳದಲ್ಲಿ ವಾಸ್ತವ್ಯ ಇರುವುದಾಗಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ