ರಾಷ್ಟ್ರೀಯ ಸೇವಾ ಯೋಜನೆ: ಪರಿಸರ ದಿನಾಚರಣೆ

Upayuktha
0


ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ಅಗತ್ಯತೆ ಇರುವುದಿಲ್ಲ. ಪರಿಸರದ ಬಗ್ಗೆ ಸರಿಯಾದ ಪ್ರಜ್ಞೆ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.


ಇವರು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರಗಳ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದರು. 


ಹಾಗೆಯೇ ಸ್ವಯಂ ಸೇವಕರು ಸ್ಥಳೀಯ ಜಾಗಗಳ ಹಾಗೂ ಬಸ್ ನಿಲ್ದಾಣದ ಕಸಗಳನ್ನು ಸ್ವಚ್ಛಗೊಳಿಸಿ ಶುಚಿಗೊಳಿಸಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮ ನಿರ್ವಹಿಸಿದರು. ಸಹ ಯೋಜನಾಧಿಕಾರಿ ಶ್ರೀಮತಿ ಪದ್ಮಶ್ರೀ ರಕ್ಷಿತ್ ಅವರು ಸ್ವಯಂ ಸೇವಕರಿಗೆ ಮಾರ್ಗದರ್ಶನ ಮಾಡಿದರು. ಘಟಕದ ನಾಯಕ ಆದಿತ್ಯ.ವಿ.ಧನ್ಯವಾದ ಅರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top