ಸುರತ್ಕಲ್‌ನಲ್ಲಿ 'ಸಾಹಿತ್ಯ ಸಿರಿ'

Upayuktha
0


ಮಂಗಳೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕದ 'ಸಾಹಿತ್ಯ ಸಿರಿ' ಕಾರ್ಯಕ್ರಮ ಜೂ.22ರಂದು ಕಾಟಿಪಳ್ಳ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು 'ಅಮೃತ ಪ್ರಕಾಶ' ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಪಿ.ದಯಾಕರ್ ಮಾತನಾಡಿ, 'ಇಂತಹ ಸಾಹಿತ್ಯದ ಸಂಪತ್ತನ್ನು ಹೆಚ್ಚಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಾ ಇರಲಿ' ಎಂದು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ, ವಾಗ್ಮಿ ರೇಮಂಡ್ ಡಿ. ಕುನ್ಹಾರವರು ಭಾಗವಹಿಸಿ ಮಕ್ಕಳಿಗೆ ಕಥೆ ಕಟ್ಟುವ ವಿಧಾನ ಹಾಗೂ ಅವುಗಳು ತೆರೆದುಕೊಳ್ಳುವಂತಹ ಕುತೂಹಲದ ಬಾಗಿಲು ಹೇಗಿರಬೇಕು ಎಂದು ತಿಳಿಸಿಕೊಟ್ಟರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ, ಚಿಂತಕ, ವಾಗ್ಮಿ, ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್, ಎಂ.ಆರ್.ಪಿ.ಎಲ್ ವಿಶ್ರಾಂತ ಪ್ರಬಂಧಕರಾದ ವೀಣಾ ಶೆಟ್ಟಿ, ತಾಲೂಕು ಕ.ಸಾ.ಪ ಅಧ್ಯಕ್ಷ ಮಂಜುನಾಥ ಎಸ್. ರೇವಣ್‌ಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತಾ, ಸಾಹಿತ್ಯ ಸತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.


ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ, ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಗುಣವತಿ ರಮೇಶ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಕವಯತ್ರಿ ಅನುರಾಧ ರಾಜೀವ್, ಲಲಿತ ಪದ್ಮಿನಿಯವರಿಂದ ಸ್ವರಚಿರ ಕವನ ವಾಚನ ಈ ಸಂದರ್ಭದಲ್ಲಿ ನಡೆಯಿತು. ಶ್ರೀ ನಾರಾಯಣ ಗುರು ಸಮೂಹ ಸಂಸ್ಥೆಗಳ ಮುಖ್ಯಸ್ಥರುಗಳು, ಶಿಕ್ಷಕರು, ಸುಮಾರು 200ಕ್ಕೂ ಹೆಚ್ವು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಶಿಕ್ಷಕಿ ಶ್ರೀಮತಿ ರೇಣುಕಾ ವಂದಿಸಿ, ಕ.ಸಾ.ಪ ಸುರತ್ಕಲ್ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಶಿಕ್ಷಕಿ ಅಕ್ಷತಾ ಕೇಶವ್ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top