ಕಲ್ಲಡ್ಕ ವಲಯ ಶೌರ್ಯ ವಿಪತ್ತು ತಂಡದಿಂದ ಶಾಲೆಯ ಬಾವಿ ಸ್ವಚ್ಛತಾ ಕಾರ್ಯ

Upayuktha
0


ಬಂಟ್ವಾಳ: ಕಲ್ಲಡ್ಕ ಶೌರ್ಯ ವಿಪತ್ತು ತಂಡದ 11 ಮಂದಿ ಸದಸ್ಯರು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಆವರಣದ ಬಾವಿ ಮತ್ತು ನೀರಿನ ಟ್ಯಾಂಕ್‌ ಅನ್ನು ಇಂದು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.


ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯು ಈ ಕುರಿತು ಕಲ್ಲಡ್ಕ ಶೌರ್ಯ ವಿಪತ್ತು ತಂಡಕ್ಕೆ ಲಿಖಿತ ಮನವಿ ಸಲ್ಲಿಸಿದ್ದು, ತಂಡದ ಸದಸ್ಯರು ಕೂಡಲೇ ಕಾರ್ಯಪ್ರವೃತ್ತರಾದರು.


ಈ ಸ್ವಚ್ಛತಾ ಕಾರ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ಶೌರ್ಯ ವಿಪತ್ತು ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಳಾದ ವೆಂಕಪ್ಪ, ರವಿಚಂದ್ರ,ಮೌರೀಶ್, ರಮೇಶ್, ಚಿನ್ನಾ, ಸಂತೋಷ್, ಧನಂಜಯ, ಗಣೇಶ್, ಮೊದಲಾದವರು ಭಾಗವಹಿಸಿದ್ದರು. ಕಲ್ಲಡ್ಕ ಶೌರ್ಯ ತಂಡದ ಕಾರ್ಯಕ್ಕೆ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು ಅಭಿನಂದನೆ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
To Top