ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘ(ರಿ) ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕರ‍್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಜೂನ್ 8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್.ಪಿ, ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕರ‍್ಯದರ್ಶಿ ಡಾ. ಮನಮೋಹನ.ಎಂ ಉಪಸ್ಥಿತರಿರುತ್ತಾರೆ.
ಪೂರ್ವಾಹ್ನ ಸರಸ್ವತಿ ಪೂಜೆ ನೆರವೇರಲಿದ್ದು ತದನಂತರದಲ್ಲಿ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದಿಂದ ಭಗವದ್ಗೀತೆ ಪುಸ್ತಕವನ್ನು ನೀಡಿ ಸ್ವಾಗತ ಕಾರ್ಯಕ್ರಮ ನೆರವೇರಲಿದೆ.
ಸನ್ಮಾನ ಸಮಾರಂಭ
ಈ ಸಂದರ್ಭದಲ್ಲಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಮಾಧವ.ಎಚ್ ಹಾಗೂ ವಿಶ್ರಾಂತ ಪ್ರಾಧ್ಯಾಪಕರುಗಳಾದ ಪ್ರೊ.ವತ್ಸಲಾ ರಾಜ್ಞಿ, ಪ್ರೊ.ಸಿಸಿಲಿ ಕುಟ್ಟಿ ಫಿಲಿಪ್ ಹಾಗೂ ಮೇಜರ್ ಪ್ರೊ.ಎಂ.ಎನ್ ಚೆಟ್ಟಿಯಾರ್ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಹಿರಿಯ ವಿದ್ಯಾರ್ಥಿಳಾದ ಅಕ್ಸೆಂಚರ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಪುರುಷೋತ್ತಮ ಕಡಂಬು ಹಾಗೂ ವಿಶ್ರಾಂತ ಡೆಪ್ಯುಟಿ ಸುಪರಿಟೆಂಡ್ ಆಫ್ ಪೊಲೀಸ್ ಆಗಿರುವ ಶ್ರೀರಾಮ ತಲೆಂಗಳ ಇವರಿಗೆ ಗೌರವಾರ್ಪಣೆ ನೆರವೇರಲಿದೆ. ಇದರೊಂದಿಗೆ ಕಳೆದ ವರ್ಷದಲ್ಲಿ ವಿಶ್ವವಿದ್ಯಾನಿಲಯದ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕರ‍್ಯಕ್ರಮ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಕರ‍್ಯದರ್ಶಿ ಡಾ. ಮನಮೋಹನ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ