ರಾಜ್ಯವನ್ನು ದಿವಾಳಿ ಮಾಡಿದ ಸಿದ್ದರಾಮಯ್ಯ ಸರಕಾರ: ಶಾಸಕ ಡಾ. ಭರತ್ ಶೆಟ್ಟಿ

Upayuktha
0


ಕಾವೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ಬಾರಿ ರಾಜ್ಯ ಬಜೆಟ್ ಮಂಡಿಸಿದ ಸ್ವಯಂ ಘೋಷಿತ ಆರ್ಥಿಕ ತಜ್ಞ ಎನಿಸಿಕೊಂಡಿದ್ದರೂ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಟೀಕಿಸಿದರು. 


ಮಂಗಳೂರು ಉತ್ತರ ಮಂಡಲ ಬಿಜೆಪಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ, ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಜನರಿಗೆ ಶಾಸಕರುಗಳು ಉತ್ತರ ನೀಡಲಾಗದ ಸ್ಥಿತಿಯಲ್ಲಿದ್ದೇವೆ ಎಂದರು.


ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯು ಪ್ರಯಾಣ ಮತ್ತು ದಿನಬಳಕೆಯ ವಸ್ತುಗಳ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ. ಅವರು ಇತರ ರಾಜ್ಯಗಳಲ್ಲಿನ ಇಂಧನ ಬೆಲೆಗಳನ್ನು ಹೋಲಿಸಿದ್ದಕ್ಕಾಗಿ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು.


ಸಂಪನ್ಮೂಲಗಳನ್ನು ಸಂಗ್ರಹಿಸಲು ಬೆಂಗಳೂರಿನ ಬಳಿಯ ಸುಮಾರು 25,000 ಎಕರೆ ಭೂಮಿಯನ್ನು ಮಾರಾಟ, ರಿಯಲ್ ಎಸ್ಟೇಟ್ ದಂದೆಗೆ ತೊಡಗಿಸುವ ಮಾತುಕತೆ ವಿಫಲವಾಗಿದೆ. ಇದೇ ರೀತಿ ಮುಂದುವರಿದರೆ ರಾಜ್ಯ ಆರ್ಥಿಕ ಇಕ್ಕಟ್ಟಿಗೆ ಸಿಲುಕಿ ಜನ ತೊಂದರೆ ಗೆ ಒಳಗಾಗಲಿದ್ದಾರೆ ಎಂದರು.


ಸುದ್ದಿಗೋಷ್ಟಿಯಲ್ಲಿ ಮಂಡಲದ ಅಧ್ಯಕ್ಷ ರಾಜೇಶ್ ಕೊಠಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ರಣದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ ಮತ್ತಿತರರು ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top