100 ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Upayuktha
0


ಅಮೀನಗಡ: ಸಮೀಪದ ಸೂಳೇಬಾವಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ನಿರ್ಮಿತಿ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುನಗುಂದ ಇವರ ಸಹಯೋಗದಲ್ಲಿ ಸರಕಾರಿ ಶಾಲೆಗಳ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭ ನಡೆಯಲಿದೆ. 


ಹುನಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಹಂತದ ಆಯ್ದ ಒಂದು ನೂರು ಶಾಲೆಗಳಲ್ಲಿ ಈ ಸೇವೆ ಲೋಕಾರ್ಪಣೆಗೊಳ್ಳಲಿದೆ. 2023-24 ನೇ ಸಾಲಿನ ಡಿ ಎಂ ಎಫ್ ಅನುದಾನದಡಿಯಲ್ಲಿ ಅಳವಡಿಸಲಾಗಿರುವ ಸ್ಮಾರ್ಟ್ ಕ್ಲಾಸ್ ಗಳು ಗುಣಮಟ್ಟದ ಶಿಕ್ಷಣ, ಸರಕಾರಿ ಶಾಲೆಗಳ ಸಬಲೀಕರಣ, ಆಕರ್ಷಕ, ಆಧುನಿಕ ಡಿಜಿಟಲ್ ತಂತ್ರಜ್ಞಾನಾಧಾರಿತ ಬೋಧನಾ ವ್ಯವಸ್ಥೆ, ಮಕ್ಕಳ ದಾಖಲಾತಿ ಹೆಚ್ಚಳದಂತಹ ಅನೇಕ ಗುರಿ-ಉದ್ದೇಶಗಳನ್ನಿಟ್ಟುಕೊಂಡು ಚಾಲನೆಗೊಳ್ಳಲಿದೆ.


ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ನೆರವೇರಿಸಲಿದ್ದು, ಚಿತ್ತರಗಿ ಶ್ರೀ ವಿಜಯ ಮಹಾಂತೇಶ ಸಂಸ್ಥಾನ ಮಠ, ಇಳಕಲ್ಲದ ಗುರು ಮಹಾಂತ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಶಾಸಕರಾದ ಎಚ್ ವೈ ಮೇಟಿ, ಜೆ ಟಿ ಪಾಟೀಲ, ಸಂಸದರಾದ ಪಿಸಿ ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ, ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ, ಹನುಮಂತ ನಿರಾಣಿ, ಸುನೀಲಗೌಡ ಬಿ ಪಾಟೀಲ್, ಸೂಳೇಬಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿಡ್ಡಪ್ಪ ಕುರಿ, ಜಿಲ್ಲಾಧಿಕಾರಿ ಕೆ ಎಂ ಜಾನಕಿ, ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ, ಉಪನಿರ್ದೇಶಕರಾದ ಬಿ ಕೆ ನಂದನೂರ, ಉಪ ವಿಭಾಗಾಧಿಕಾರಿ ಸಂತೋಷ್ ಜಗಲಾಸರ, ಹುನಗುಂದ ತಾಲೂಕ ಪಂಚಾಯತ್ ಆಡಳಿತಾಧಿಕಾರಿ ಡಾ. ಪುನೀತ್ ಜಿ ಆರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮುತ್ತಪ್ಪ ಪಿ, ನಿರ್ಮಿತಿ ಕೇಂದ್ರ ಬಾಗಲಕೋಟೆಯ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ತಹಸೀಲ್ದಾರ್ ನಿಂಗಪ್ಪ ಬಿರಾದಾರ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುರುಳಿಧರ ದೇಶಪಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ, ತಾಲೂಕ ಅಕ್ಷರ ದಾಸೋಹ ಅಧಿಕಾರಿ ಬಿ ಹೆಚ್ ತಿಳಿಗೋಳ, ಪ್ರಭಾರಿ ಕ್ಷೇತ್ರ ಸಮನ್ವಯ ಅಧಿಕಾರಿ ವಿನೋದಕುಮಾರ್ ಭೋವಿ ಭಾಗವಹಿಸಲಿದ್ದಾರೆ.


ಅತಿಥಿಗಳಾಗಿ ಮಾಜಿ ಶಾಸಕ ಎಸ್ ಜಿ ನಂಜಯ್ಯನಮಠ, ರವೀಂದ್ರ ಕಲಬುರ್ಗಿ, ಗಂಗಾಧರ ದೊಡ್ಡಮನಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top