ಮಂಗಳೂರು: ಟೈಡ್ ವಾಟರ್ ಆಯಿಲ್ ಕಂ (ಇಂಡಿಯಾ) ಲಿಮಿಟೆಡ್ ಅಧೀನದ ಭಾರತದ ಪ್ರಮುಖ ಲೂಬ್ರಿಕೆಂಟ್ ಬ್ರಾಂಡ್‍ಗಳಲ್ಲಿ ಒಂದಾಗಿರುವ ವೀಡಾಲ್ ಕ್ರಿಕೆಟ್ ಕ್ಷೇತ್ರದ ದಿಗ್ಗಜ ಸೌರವ್ ಗಂಗೂಲಿ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದೆ.
ಈ ಪಾಲುದಾರಿಕೆಯು ವೀಡಾಲ್ ಕಂಪನಿಯು ತನ್ನ ಬ್ರ್ಯಾಂಡ್ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಮತ್ತು ಭಾರತದಾದ್ಯಂತ ಇರುವ ತನ್ನ ಮಾರುಕಟ್ಟೆ ಸ್ಥಾನವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ವೀಡಾಲ್ ಬ್ರ್ಯಾಂಡ್ 70ಕ್ಕೂ ಹೆಚ್ಚು ದೇಶಗಳಲ್ಲಿ ಮಾರುಕಟ್ಟೆ ಹೊಂದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಅರಿಜಿತ್ ಬಸು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸೌರವ್ ಗಂಗೂಲಿಯಂತಹ ಕ್ರಿಕೆಟ್ ದಿಗ್ಗಜ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ನಮ್ಮೊಂದಿಗೆ ಸೇರಿರುವುದಕ್ಕೆ ನಾವು ಸಂತೋಷ ಪಡುತ್ತೇವೆ. ಗಂಗೂಲಿಯವರು ವೀಡಾಲ್ ಬಲವಾಗಿ ಪ್ರತಿಧ್ವನಿಸುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಹಾಗೂ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸಿ ಸಾಧನೆ ಮಾಡಲು ಎಲ್ಲರಿಗೂ ಸ್ಫೂರ್ತಿ ನೀಡಲಿದ್ದಾರೆ ಎಂದು ಬಣ್ಣಿಸಿದ್ದಾರೆ,
ವೀಡಾಲ್ ಜೊತೆಗಿನ ನನ್ನ ಒಡನಾಟವು ಶ್ರೇಷ್ಠತೆ, ನಾವೀನ್ಯತೆ ಮತ್ತು ವಿಶ್ವಾಸಾರ್ಹತೆ ಕಡೆಗಿನ ಬದ್ಧತೆಯನ್ನು ಪ್ರತಿನಿಧಿಸುತ್ತದೆ ಎಂದು ಗಂಗೂಲಿ ಸಂತಸ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ