ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ಸೀವಿಂಗ್ ಟೆಕ್ನಾಲಜಿ ವಿದ್ಯಾರ್ಥಿನಿಯರಿಗೆ ‘ಮೆಷಿನ್ ಎಂಬ್ರಾಯ್ಡರಿ’ ಕುರಿತ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ವೇಣೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಶೇಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಎಂಬ್ರಾಯ್ಡರಿ ಯಂತ್ರದ ಕಾರ್ಯವೈಖರಿ ವಿವರಿಸಿದ ಅವರು, ಸುಮಾರು 150 ಕ್ಕೂ ಹೆಚ್ಚು ವಿವಿಧ ಎಂಬ್ರಾಯ್ಡರಿ ವಿನ್ಯಾಸಗಳ ಬಗ್ಗೆ ತಿಳಿಸಿದರು. ಹ್ಯಾಂಡ್ ಎಂಬ್ರಾಯ್ಡರಿ ಮತ್ತು ಮೆಷಿನ್ ಎಂಬ್ರಾಯ್ಡರಿ ನಡುವಣ ವ್ಯತ್ಯಾಸ ತಿಳಿಸಿದರು.
ವಿದ್ಯಾರ್ಥಿನಿಯರು ಎಂಬ್ರಾಯ್ಡರಿ ಯಂತ್ರವನ್ನು ಬಳಸುವ ಅನುಭವ ಪಡೆದರು.
ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ