ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ "ವಿವೇಕ ಮುನ್ನುಡಿ-2024" ನಾಳೆ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜೂ.21ರ ಶುಕ್ರವಾರ, ಅಪರಾಹ್ನ 1:30 ಗಂಟೆಗೆ 2024-25 ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ "ವಿವೇಕ ಮುನ್ನುಡಿ-2024" ನ್ನು  ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಾರ್ಯಕ್ರಮವು ನಡೆಯಲಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಇವರು ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. 


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷರಾದ ರವೀಂದ್ರ ಪಿ.  ಅವರು ವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಕೃಷ್ಣಪ್ರಸನ್ನ, ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀಧರ್‌ ಶೆಟ್ಟಿಗಾರ್‌ , ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top