ಸುರತ್ಕಲ್: ಅನುದಾನಿತ ವಿದ್ಯಾದಾಯಿನೀ ಪ್ರೌಡಶಾಲೆ ಸುರತ್ಕಲ್‌ನಲ್ಲಿ ಇಂದು (ಜೂ.12) ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಅವರು ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕರ ಸಮಸ್ಯೆಗಳಿಗೆ ಕಾರಣಗಳು, ಹಾಗೂ ಪರಿಹಾರೋಪಾಯಗಳ ಬಗ್ಗೆ ವಿಚಾರಗಳನ್ನು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ಬಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಭಾಷಣ, ಘೋಷಣಾ ವಾಕ್ಯಗಳನ್ನು ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದಲೇ ರಚಿತವಾದ ಕಿರುನಾಟಕ ಪ್ರದರ್ಶಿಸಲಾಯಿತು. ಸಹ ಶಿಕ್ಷಕ ದಿವಸ್ಪತಿ ಕಾರ್ಯಕ್ರಮ ನಿರೂಪಿಸಿ, 10ನೇ ಬಿ ತರಗತಿಯ ವಿದ್ಯಾರ್ಥಿನಿ ಶಿವಾನಿ ವಂದಿಸಿದಳು. ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ