ಸುರತ್ಕಲ್ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಿಂದ ಪದ ಸ್ವೀಕಾರ

Upayuktha
0


ಸುರತ್ಕಲ್: ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘ ಸುರತ್ಕಲ್ ಇದರ ನೂತನ ಅಧ್ಯಕ್ಷರಾದ ವಿನಯ ಆಚಾರ್ ಅವರಿಗೆ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಎಚ್ ಅವರಿಂದ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ಸಂಘದ ಕಛೇರಿಯಲ್ಲಿ ನಡೆಯಿತು.


ಹಿಂದೂ ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ರಮೇಶ್ ಟಿ.ಎನ್, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರಗಿತು. ಸತತವಾಗಿ ಹತ್ತು ವರ್ಷದ ಅವಧಿಯಲ್ಲಿ ಸಂಘದ ಕಾರ್ಯಕ್ರಮಗಳು, ಕೋವಿಡ್ ಸಂದರ್ಭದಲ್ಲಿ ಹಮ್ಮಿಕೊಂಡ ನಮ್ಮ ಶಾಲೆ ನಮ್ಮ ಸಹಾಯ ಯೋಜನೆಗಳನ್ನು ಯಶಸ್ವಿಗೊಳಿಸಲು ತನು ಮನ ಧನ ಸಹಾಯ ನೀಡಿ ವಿದ್ಯಾದಾಯಿನೀ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಹಕರಿಸಿದವರಿಗೆಲ್ಲರಿಗೂ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಎಚ್ ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದರು. ಶ್ರೀನಿವಾಸ ಕುಳಾಯಿ ಕಾರ್ಯಕ್ರಮ ನಿರ್ವಹಣೆ ಮಾಡಿದ್ದು ಶ್ರೀಮತಿ ವೀಣಾ ಕೃಷ್ಣಮೂರ್ತಿ ರಾವ್ ರವರು ಪ್ರಾರ್ಥನೆ ನೆರವೇರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top