ಸುರತ್ಕಲ್: ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಇಂದು (ಜೂ.5) ಪರಿಸರ ಸಂಘ ಹಾಗೂ ಎನ್‌ಸಿಸಿ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಬಾಲಚಂದ್ರ ಕೆ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಸಂಚಾಲಕ ಸುಧಾಕರ ರಾವ್ ಪೇಜಾವರ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕೆಪಿಟಿ ಕದ್ರಿಯ ನಿವೃತ್ತ ಪ್ರಾಂಶುಪಾಲೆ ಸುಶೀಲ ಕುಮಾರಿ ಇವರು ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ಅಳಿಕೆಯ ನಿವೃತ್ತ ಉಪನ್ಯಾಸಕ ಡಾ. ಪೂವಪ್ಪ ಶೆಟ್ಟಿ ಅಳಿಕೆ ಇವರು ವಿದ್ಯಾರ್ಥಿಗಳಿಗೆ ಜೀವನದ ಹಲವು ಘಟನೆಗಳನ್ನು ಮೆಲುಕು ಹಾಕುವುದರ ಮೂಲಕ ಶಿಸ್ತು ಕರ್ತವ್ಯ, ತ್ಯಾಗ, ನಿರ್ಧಾರ ಈ ವಿಚಾರಗಳನ್ನು ಸಣ್ಣ ವಯಸ್ಸಿನಲ್ಲಿಯೇ ಮೈಗೂಡಿಸಿಕೊಳ್ಳುವುದರ ಅಗತ್ಯತೆಯನ್ನು ವಿವರಿಸಿದರು ಹಾಗೂ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ದಿವಸ್ಪತಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವೈಶಾಲಿ ವಂದಿಸಿದರು.
ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ