ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನಲ್ಲಿ ಸ್ನಾತಕೋತ್ತರ ಪರೀಕ್ಷೆಗಳಲ್ಲಿ 2 ರ‍್ಯಾಂಕ್ ಗಳಿಸಿದೆ. ಎಂ.ಎ. ಇತಿಹಾಸ ವಿಭಾಗದ ದಯೇಶ್ ಪ್ರಥಮ ರ‍್ಯಾಂಕ್ ಹಾಗೂ ಎಂ.ಎ. ಸಮಾಜಶಾಸ್ತ್ರ ವಿಭಾಗದ ನಾಗರತ್ನ ಪ್ರಥಮ ರ‍್ಯಾಂಕ್ ಪಡೆದಿರುತ್ತಾರೆ.
ಇತಿಹಾಸ ಹಾಗೂ ಸಮಾಜಶಾಸ್ತ್ರ ವಿಭಾಗಗಳೆರಡೂ ಸತತವಾಗಿ ಕಳೆದ ಮೂರು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳಲ್ಲಿ ಪ್ರಥಮ ರ‍್ಯಾಂಕನ್ನು ತಮ್ಮದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ಈ ಅಪೂರ್ವ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಬೋಧಕ/ಬೋಧಕೇತರ ವೃಂದ, ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ