ತೆಂಕನಿಡಿಯೂರು ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಎಂ.ಕಾಂ. ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಬುಧವಾರದಂದು ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಎಂ.ಕಾಂ. ಅಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನೆರವೇರಿತು.  ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಲೋಕೇಶ, ಸಹಾಯಕ ಪ್ರಾಧ್ಯಾಪಕರು, ಸ.ಪ್ರ.ದ. ಕಾಲೇಜು ಹಳೆಯಂಗಡಿ ಇವರು ಚೇಂಜಿಂಗ್ ಬಿಸ್‌ನೆಸ್ ಮೊಡೆಲ್ಸ್ ಕುರಿತು ನಿಖರವಾದ ಮತ್ತು ವಿವರವಾದ ಮಾಹಿತಿ ನೀಡಿದರು.  


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ವಿಭಾಗ ಮುಖ್ಯಸ್ಥರಾದ ಟಿ.ಜಿ. ಭಟ್, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಭಾಗದ ಸಂಚಾಲಕರಾದ ಡಾ. ಉದಯ ಶೆಟ್ಟಿ ಕೆ., ಉಪನ್ಯಾಸಕಿಯರಾದ ಶ್ರೀಮತಿ ಸ್ಮಿತಾ ಮತ್ತು ಶ್ರೀಮತಿ ಸೋನಿಯಾ ನೊರೋನ್ಹ ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿ ಓಂಕಾರ್ ಎಲ್ಲರನ್ನೂ ಸ್ವಾಗತಿಸಿದರು.  ಸ್ವೀಕೃತಿ ವಂದಿಸಿದರು.  ತ್ರಿವೇಣಿ ನಿಂಜೂರು ಕಾರ್ಯಕ್ರಮ ನಿರೂಪಿಸಿದರು.




 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top