ಬಳ್ಳಾರಿ: ಬಳ್ಳಾರಿ ಜಿಲ್ಲಾ ಬಿ.ಜೆ.ಪಿ. ರೈತಮೋರ್ಚಾ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ, ಈ ಪರಿಸ್ಥಿತಿಯಲ್ಲಿ ರೈತರಿಗೆ ಬರೆ ಎಳೆದಂತಾಗುತ್ತದೆ. ಈ ಕೆಳಗಿನ ಅಂಶಗಳನ್ನು ಸರ್ಕಾರ ಪರಿಗಣಿಸಬೇಕಾಗಿ ಬಳ್ಳಾರಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷರಾದ ಐನಾಥರೆಡ್ಡಿಯವರು ವಿನಂತಿ ಮಾಡಿಕೊಂಡಿದ್ದಾರೆ.
ಕಳೆದ ಬಜೆಟ್‌ನಲ್ಲಿ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ಬಳಕೆಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಷಯದ ಬಗ್ಗೆ ಸರ್ಕಾರ ಸ್ಪಷ್ಟನೆಯನ್ನು ನೀಡಬೇಕು, ಬಾಕಿ ಉಳಿದಿರುವ ಎಂಟು ತಿಂಗಳ ಹಣವನ್ನು ಯಾವಾಗ ಕೊಡುತ್ತಾರೆ ಎಂದು ರೈತರು ಪ್ರಶ್ನಿಸಿದರೆ, ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು. ಹಾಲಿನ ಪ್ರೋತ್ಸಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್‌ಗಳಿಗೆ ನೀಡುವಂತಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆಮಾಡಲಾಗಿದೆ, ಮುದ್ರಾಂಕ ದರವನ್ನು ಏರಿಸಿದೆ, ಅಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ, ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮಹತ್ಯೆಗೆ ಕಾರಣಗಳೇನು?
ಮತ್ತು ರೈತರಿಗೆ ಅತ್ಯಂತ ನಿಕಟವಾಗಿರುವ ಇಲಾಖೆ ಕಂದಾಯ ಇಲಾಖೆ, ಆ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕೇಳಿ ಬರುತ್ತಿದೆ. 40 ಪರ್ಸೆಂಟ್ ಸರ್ಕಾರ ಎಂದಿದ್ದ ಕಾಂಗ್ರೆಸ್ ಈಗ ಅದೇ ಆರೋಪ ಎದುರಿಸುತ್ತಿದೆ. ನ್ಯಾಯಮೂರ್ತಿ ನಾಗಮಹೋನ್ ದಾಸ್ ಅಯೋಗ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ, ಬೆಲೆ ಏರಿಕೆಯನ್ನು ಬಳುವಳಿಯಾಗಿ ಕೊಟ್ಟ ಕಾಂಗ್ರೆಸ್ ಸರ್ಕಾರ (ವಿದ್ಯುತ್ ದರ, ಪಶು ಆಹಾರಕ್ಕೆ ಪ್ರತಿ ಮೆಟ್ರಿಕ್ ಟನ್ ಗೆ ರೂ. 500 ಹೆಚ್ಚಿಸಿದೆ. ಹಾಲಿನ ದರವನ್ನು ರೂ.4ರಷ್ಟನ್ನು ಏರಿಸಿ ಆ ಹಣವನ್ನು ರೈತರಿಗೆ ತಲುಪಿಸಲಾಗುವುದು ಎಂದು ಹೇಳಿಕೆ ಕೊಟ್ಟು, ಏಕೆ ರೈತರಿಗೆ ತಲುಪಿಸಿಲ್ಲ. ಮತ್ತೆ ಈಗ ಅದೇ ಕಾರಣವನ್ನು ನೀಡಿ 2 ರೂ ಹೆಚ್ಚಿಸಲಾಗಿದೆ. ಒಟ್ಟು ಈ 6 ರೂಗಳನ್ನು ಯಾವಾಗ ರೈತರಿಗೆ ನೀಡುತ್ತೀರಿ ಎಂದು ಬಳ್ಳಾರಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ಐನಾಥರೆಡ್ಡಿವರು ರಾಜ್ಯ ಕಾಂಗ್ರೆಸ್ ಸರಕಾರವನ್ನು ಪ್ರಶ್ನಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ