ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಪೆರಂಪಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಪೆರಂಪಳ್ಳಿಯ ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ವಿಕಾಸ ಟ್ರಸ್ಟ್ನ ಹಿರಿಯ ಸಲಹೆಗಾರ ಸಿ ಜಗದೀಶ ಪೈ ಮಾತನಾಡಿ, ಸ್ತ್ರೀ ಶಕ್ತಿ ದೇಶದ ಶಕ್ತಿ. ದೇಶದ ಸುಭದ್ರತೆಗೆ ಮಹಿಳಾ ಸಬಲೀಕರಣ ಮಹತ್ತರ ಪಾತ್ರ ವಹಿಸುತ್ತದೆ. ಸದಸ್ಯರಿಗೆ ಕಾಲಕಾಲಕ್ಕೆ ಕೌಶಲ್ಯಾಭಿವೃಧಿ ತರಬೇತಿ ಹಮ್ಮಿಕೊಳ್ಳುವುದರಿಂದ ಕ್ರಿಯಾಶೀಲರಾಗಿ ಗುಂಪು ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಮಾತನಾಡಿ, ತರಬೇತಿಗಳು ಜ್ಞಾನ ಮತ್ತು ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಹಿಳೆಯರು ಮನೆ, ಮಕ್ಕಳ ಜವಾಬ್ದಾರಿಯ ಜೊತೆ ಸಮಾಜದ ಅಭಿವೃದ್ಧಿಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಾರೆ. ತರಬೇತಿಯಲ್ಲಿ ಪಡೆದುಕೊಂಡ ಮಾಹಿತಿಯನ್ನು ಗುಂಪಿನ ಇತರೆ ಸದಸ್ಯರೊಂದಿಗೆ ಹಂಚಿಕೊಂಡು ಅಭಿವೃದ್ಧಿಯ ಪಥದಲ್ಲಿ ಮಹತ್ತರ ಜವಾಬ್ದಾರಿ ವಹಿಸಲು ಮಹಿಳೆಯರು ಕಾರಣೀಭೂತರಾಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಕ್ಷರತಾ ಸಂಸ್ಥೆಯ ಮೀರಾ ಜೆ ಅಮೂಲ್ಯ, ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕಿಯರು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಟರ್ ಸ್ಪೆಷಲಿಸ್ಟ್ ದೀಪಾ ನಿರೂಪಿಸಿದರೆ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ