ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಹಾಕಪ್ಪ ಆರ್ ಲಮಾಣಿ

Upayuktha
0


ಉಡುಪಿ: ಸರಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಹೇಳಿದರು.


ಅವರು ಶುಕ್ರವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆಯ ವತಿಯಿಂದ ನಡೆದ 2023-24 ನೇ ಸಾಲಿನಲ್ಲಿ ಉಡುಪಿ ತಾಲೂಕು ಸಂಬಂಧಿಸಿದ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವ್ಯಾಸಾಂಗ ಮಾಡಿ ಶೇ. 90 ಕ್ಕೂ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ರಾಜ್ಯ ಮಟ್ಟದಲ್ಲಿಯೇ ಉಡುಪಿ ಜಿಲ್ಲೆಯು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು. ಇದಕ್ಕೆ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಪರಿಶ್ರಮವೇ ಕಾರಣ. ಮುಂದಿನ ದಿನಗಳಲ್ಲಿಯೂ ಸಹ ಉಡುಪಿ ಜಿಲ್ಲೆಯು ಶೇಕಡಾ ನೂರರಷ್ಟು ಫಲಿತಾಂಶವನ್ನು ಪಡೆದು ಜಿಲ್ಲೆಯ ಹೆಗ್ಗಳಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದರು.


ಈ ಸಂದರ್ಭದಲ್ಲಿ ನಿಟ್ಟೂರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ದೇವರಾಜ್, ಹಿರಿಯಡ್ಕ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಾದ ಲಿಂಗರಾಜು ಮತ್ತು ಬಾಗಣ್ಣ, 76 ಬಡಗಬೆಟ್ಟು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿ ಗೋವರ್ಧನ್, ಬಲೈಪಾದೆ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಾದ ಗಗನ್ ಮತ್ತು ಚಿರಂಜೀವಿ, ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿನಿ ಆಯೆಷಾ, ಆದಿ ಉಡುಪಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿನಿ ಮಂಜುಳ, ಕಿನ್ನಿಮೂಲ್ಕಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿನಿಗಳಾದ ದೀಪಿಕಾ ಹಾಗೂ ಪ್ರಿಯಾಂಕಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಕ್ಷ್ಮಿ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಕಾರ್ಯಕ್ರಮದಲ್ಲಿ ನಿಟ್ಟೂರು ಪ್ರೌಡಶಾಲೆಯ ಮುಖ್ಯ ಶಿಕ್ಷಕಿ ಅನುಸೂಯ, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗರಾಜ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಛಾಯಾ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಕಾರ್ಯಕ್ರಮದಲ್ಲಿ ನಿಲಯ ಮೇಲ್ವಚಾರಕಿ ಸುಜಾತ ಸ್ವಾಗತಿಸಿದರೆ, ಶ್ರೀಕಾಂತ್ ಗುನಗ ನಿರೂಪಿಸಿ ವಸಂತಿ ಕುಮಾರಿ ಎನ್.ಎಸ್ ವಂದಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top