ಪಾಡಿಗಾರು: ಸುಗುಣ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Upayuktha
0

ಉಡುಪಿ: ಪರಿಸರ ದಿನಾಚರಣೆಯ ಅಂಗವಾಗಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಪಾಡಿಗಾರು ಸುಗುಣ ಶಾಲೆಯ ವತಿಯಿಂದ ಪುತ್ತಿಗೆ ಮಠದ ಪಾಡಿಗಾರಿನಲ್ಲಿರುವ ಸುಗುಣ ಶಾಲೆಯಲ್ಲಿ ಇಂದು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಸುಗುಣ ಶಾಲೆಯ ಕಾರ್ಯದರ್ಶಿ ಪ್ರಮೋದ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಪರಿಸರ ದಿನಾಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಿ ಸ್ವಾಗತಿಸಿದರು.


ಹೆಚ್‌ಡಿಎಫ್‌ಸಿ ಬ್ಯಾಂಕಿನ ನಿವೃತ್ತ ಅಧಿಕಾರಿ ಕೆ ರವೀಂದ್ರ ಆಚಾರ್ಯ ಅವರು ಬ್ಯಾಂಕಿನ ಪರವಾಗಿ ಮಾತನಾಡಿ, ಪರಿಸರ ದಿನಾಚರಣೆ ಹಾಗೂ ವನಮಹೋತ್ಸವದ ಬಗ್ಗೆ ತಿಳಿಸಿ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಕಚೇರಿ ನಿರ್ವಾಹಕರು, ಹೆಚ್‌ಡಿಎಫ್‌ಸಿ ಬ್ಯಾಂಕಿನ ಮ್ಯಾನೇಜರ್ ಪ್ರಸನ್ನ ಕುಮಾರ್ ಹಾಗೂ ರಾಘವೇಂದ್ರ ರಾವ್ ಅವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top