ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ ಇಲ್ಲಿನ ಹಿರಿಯ ವಿದ್ಯಾರ್ಥಿನಿ ಡಾ. ಗೀತಾಶ್ರಿ ಇವರು ಉದ್ಘಾಟಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದ ದ್ಯೇಯ ನಮಗಾಗಿ ಮತ್ತು ಸಮಾಜಕ್ಕಾಗಿ ಇದ್ದು ನಮ್ಮ ಮಾನಸಿಕ ಒತ್ತಡ, ದೈಹಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆಯನ್ನು ಕಾಪಾಡಲು ಸಹಕರಿಯಾಗುತ್ತದೆ ಜೊತೆಗೆ ಯೋಗವು ನಮ್ಮ ಸ್ವ-ಸಾಮರ್ಥ್ಯ, ದೇಹದ ತೂಕ ಮತ್ತು ದೇಹವನ್ನು ನಮ್ಯತೆಯಲ್ಲಿ ಇಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ ಕಾಮತ್ ಇವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಯೋಗ ದೇಹದ ಸಮತೋಲನ ಕಾಪಾಡುವ ಜೊತೆಗೆ ಮಾನಸಿಕ ಖಿನ್ನತೆ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ನಿರೂಪಣೆಯನ್ನು ಮಿಸ್. ಆಶಿಕ ಇವರು ನಿರ್ವಹಿಸಿದ್ದು ಮಿಸ್ ಶಾಲಿನಿ ಧನ್ಯವಾದವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

