ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಫಲಿತಾಂಶ ಪ್ರಕಟ: ವಿಸಿಇಟಿ ಪುತ್ತೂರಿಗೆ ಶೇ 99 ಫಲಿತಾಂಶ

Upayuktha
0



ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 99% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ.


ಇದೇ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 266 ವಿದ್ಯಾರ್ಥಿಗಳು ಹಾಜರಾಗಿದ್ದು 252 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್-100%, ಕಂಪ್ಯೂಟರ್ ಸೈನ್ಸ್-99%, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್-98%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ-96% ಫಲಿತಾಂಶವನ್ನು ದಾಖಲಿಸಿವೆ. ಈ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳು 100% ಫಲಿತಾಂಶವನ್ನು ಗಳಿಸಿಕೊಂಡು ವಿಶೇಷ ಸಾಧನೆಯನ್ನು ಮಾಡಿದ್ದಾರೆ.


ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top