ಮುಜುಂಗಾವು: ವಿಶ್ವ ಪರಿಸರ ದಿನವಾದ ಜೂನ್ 5ರಂದು ಶ್ರೀ ಭಾರತೀವಿದ್ಯಾಪೀಠ ಮುಜುಂಗಾವಿನಲ್ಲಿ ಗಿಡಗಳನ್ನು ನೆಟ್ಟು, ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿಶೇಷ ಮಾಹಿತಿಗಳನ್ನು ನೀಡಿ ಆಚರಿಸಲಾಯಿತು.
ಅತಿಥಿಗಳಾಗಿ ಆಗಮಿಸಿದ ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಜಯಂತ ಪಾಟಾಳಿ ಇವರು ಗಿಡಗಳನ್ನು ನೆಟ್ಟು, ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಪರಿಸರವಿಂದು ಮಲಿನಗೊಳ್ಳುತ್ತಿದೆಯಲ್ಲದೇ, ನಮ್ಮ ಉಳಿವಿಗೆ ಕಾರಣವಾದ ಮರಗಳ ನಾಶವಾಗುತ್ತಿದೆ. ಆದುದರಿಂದ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳಾದ ನೀವು ಪರಿಸರ ಸ್ನೇಹಿಗಳಾಗಬೇಂದು ಕರೆ ನೀಡಿದರು.
ಆಡಳಿತ ಸೇವಾಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಭೆಮಾರ್ಗ ಸ್ವಾಗತಿಸಿ, ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ಸಂಘದ ಕಾರ್ಯದರ್ಶಿ ಅಧ್ಯಾಪಕ ಹರಿಪ್ರಸಾದ್ ಸಂಯೋಜಿಸಿದರು. ಅಧ್ಯಾಪಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ