ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ಎಂಎ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ, ನಗದು ಬಹುಮಾನ

Upayuktha
0


ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ 2023ರ ಜುಲೈ ತಿಂಗಳಿನಲ್ಲಿ ನಡೆಸಿದ ಅಂತಿಮ ಸ್ನಾತಕೋತ್ತರ ಪದವಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ದಿವ್ಯಾಶ್ರೀ ರೈ ಪ್ರಥಮ  ರ್‍ಯಾಂಕ್ ನೊಂದಿಗೆ ಎರಡು ಚಿನ್ನದ ಪದಕ, ದಕ್ಷಿಣ ಕನ್ನಡ ಫಿಲಂ ಫೆಸ್ಟಿವಲ್ 1988 ಬಹುಮಾನ, ಪಬ್ಲಿಕ್ ರಿಲೇಶನ್ ಸೊಸೈಟಿ ಆಫ್ ಇಂಡಿಯಾ ಕ್ಯಾಶ್ ಪ್ರೈಸ್, ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ ಪ್ರೈಸ್ ಇತ್ಯಾದಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.


 ವಿಭಾಗದ ಇನ್ನೋರ್ವ ವಿದ್ಯಾರ್ಥಿನಿ ಸೋನಿಕಾ ಫೋಟೋಗ್ರಾಫಿ ಅಂಡ್ ಫೋಟೋ ಜರ್ನಲಿಸಂ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ ಪ್ರೈಸ್ ಪಡೆದುಕೊಂಡಿದ್ದಾರೆ. 


ಇವರಿಗೆ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅದ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು, ಪ್ರಾಂಶುಪಾಲರು, ನಿರ್ದೇಶಕರು, ಡೀನ್, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಶುಭಕೋರಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top