ವಿವೇಕಾನಂದ ಪಿಯು ಕಾಲೇಜು: ವಿವೇಕ ಮುನ್ನುಡಿ-2024- ವಿದ್ಯಾರ್ಥಿ ಸಂಘದ ಉದ್ಘಾಟನೆ

Upayuktha
0

 

ಪುತ್ತೂರು: ಆಧುನಿಕ ಕಾಲದ ವಿದ್ಯಾರ್ಥಿಗಳಿಗೆ ತಮ್ಮ ಶಕ್ತಿಯ ಅರಿವಿರುವುದಿಲ್ಲ. ಬೇರೆ ಬೇರೆ ಕಾರಣಗಳಿಗಾಗಿ ಅವರ ಶಕ್ತಿ ಕುಂದುತ್ತಾ ಇದೆ. ವಿದ್ಯಾರ್ಥಿ ಶಕ್ತಿ ಒಂದಾಗಿ ಇಡೀ ರಾಜ್ಯವನ್ನೇ ಗೆದ್ದ ಉದಾಹರಣೆ ನಮ್ಮ ದೇಶದಲ್ಲಿದೆ. ಉತ್ತಮ ನಾಯಕತ್ವದಿಂದ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆಯುತ್ತದೆ.” ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಇವರು ಹೇಳಿದರು.


ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ 2024-25 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಪದವಿಪೂರ್ವ ಶಿಕ್ಷಣದಲ್ಲಿ ಜೀವನ ಬದಲಾಗುತ್ತದೆ. ಒಬ್ಬ ವಿದ್ಯಾರ್ಥಿಯ ಶ್ರೇಯಸ್ಸು ಅವನ ಯೋಚನೆಗಳಲ್ಲಿ, ನಡವಳಿಕೆಗಳಲ್ಲಿ ಇರುವುದು. ಪರಿಶ್ರಮದ ಜೀವನ ನಮ್ಮನ್ನು ಬಲು ಎತ್ತರಕ್ಕೆ ಕರೆದೊಯ್ಯಬಲ್ಲದು. ಮನೆಗೆ ಒಳ್ಳೆಯ ಮಗನಾಗಿ, ಸಮಾಜಕ್ಕೆ ಉತ್ತಮ ವ್ಯಕ್ತಿಯಾಗಿ ರಾಷ್ಟ್ರವನ್ನು ಕಟ್ಟಬೇಕಿದೆ. ಪ್ರಜಾಪ್ರಭುತ್ವದ ಶ್ರೇಷ್ಠ ಅವಕಾಶವಾಗಿರುವ ಚುನಾವಣಾ ಪ್ರಕ್ರಿಯೆಯನ್ನು ವಿನೂತನವಾಗಿ ಪ್ರಯೋಗಿಸಿ ವಿದ್ಯಾರ್ಥಿಗಳು ಮತದಾನಗೈಯುವಲ್ಲಿ ಉತ್ತೇಜಿಸಿದ ವಿದ್ಯಾಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿd ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಮಾತನಾಡುತ್ತಾ, ವಿದ್ಯಾರ್ಥಿಗಳು ಭಾರತದ ಭವ್ಯ ಭವಿಷ್ಯ ಬರೆಯುವ ರೂವಾರಿಗಳು. ಗುರಿ, ಉದ್ದೇಶಗಳ ಸ್ಪಷ್ಟತೆಯಿದ್ದಾಗ ಸಾಗಲಿರುವ ದಾರಿಯು ಸ್ಪಷ್ಟವಾಗುತ್ತದೆ. ಇಂದಿನ ಓದುವ ಭರಾಟೆಯೊಳಗೆ ನಿಜವಾದ ಜೀವನ ಕಣ್ಮರೆಯಾಗುತ್ತಿದೆ. ನಾಯಕತ್ವವು ಜೀವನಕ್ಕೊಂದು ಚೌಕಟ್ಟನ್ನು ಒದಗಿಸಿ ಶಿಸ್ತುಬದ್ಧವಾದ ಬದುಕನ್ನು ನಡೆಸಲು ಪ್ರೇರೇಪಣೆ ನೀಡುತ್ತದೆ  ಎಂದು ಅವರು ಹೇಳಿದರು.


ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಡಾ. ಕೆ. ಕೃಷ್ಣಪ್ರಸನ್ನ ಅವರು ಮಾತನಾಡುತ್ತಾ “ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ದೊಡ್ಡ ಹಬ್ಬ. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಪ್ರಜ್ಞಾವಂತ ನಾಗರಿಕರಾಗಿ ಮತದಾನ ಮಾಡಿ ದೇಶದ ಪ್ರಜಾಪ್ರಭುತ್ವವನ್ನು ಭದ್ರಪಡಿಸಬೇಕಾಗಿದೆ” ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಪ್ರಸ್ತುತ ಶೈಕ್ಷಣಿಕ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಲೇಜು ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಹರ್ಷಿತ್ ಎಸ್.‌ನಾಯ್ಕ್‌, ಉಪಾಧ್ಯಕ್ಷರಾಗಿ ದ್ವಿತೀಯ ಕಲಾ ವಿಭಾಗದ ತೃಪ್ತಿ ಎ. ಕೆ., ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸನಿಹ, ಜೊತೆ ಕಾರ್ಯದರ್ಶಿಯಾಗಿ ದ್ವಿತೀಯ ಕಲಾ ವಿಭಾಗದ ಆಶ್ಲೇಷ್‌ ಎಸ್‌. ಆರ್., ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕೀರ್ತನ್‌ ಎಸ್.‌ಕೆ. ಹಾಗೂ ಕ್ರೀಡಾ ಜತೆ ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ತ್ರಿಷಾ ಆಯ್ಕೆಯಾಗಿದ್ದಾರೆ. 


ನೂತನವಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ ಹಾಗೂ ಕ್ರೀಡಾ ಪ್ರತಿನಿಧಿಗಳಿಗೆ ಶಾಸಕರ ಉಪಸ್ಥಿತಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ ಪ್ರಮಾಣವಚನ ಬೋಧಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ ಶೆಟ್ಟಿಗಾರ್‌ ಚುನಾವಣಾ ಪ್ರಕಿಯೆಯ ವರದಿ ಮಂಡಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ದೇವಿಚರಣ್‌ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಪಿ.ಕೆ. ಪರಮೇಶ್ವರ ಶರ್ಮ ನೆರೆದವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿ ಶರ್ಮಿಳಾ ಕೆ. ಎಂ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ರತ್ನಾವತಿ. ಬಿ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top