ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಮಾಹಿತಿ ಕಾರ್ಯಾಗಾರ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ವಿದ್ಯಾರ್ಥಿಗಳಿಗೆ “ತರಗತಿಯಿಂದ ಪರೀಕ್ಷೆಯ ಕಡೆಗೆ” ಶೀರ್ಷಿಕೆಯಡಿ ಮೊದಲ ಉಪನ್ಯಾಸ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ದೇವಿಚರಣ್‌ ರೈ ಎಂ ಮಾತನಾಡುತ್ತಾ “ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ದೆಸೆಯಲ್ಲಿ ಸಾಕಷ್ಟು ತಿಳುವಳಿಕೆಗಳ ಅರಿವು ಇರಬೇಕಾಗುತ್ತದೆ. ಎಲ್ಲವೂ ತಮಗೆ ತಿಳಿದಿದೆ ಅನ್ನುವ ಮನೋಭಾವನನ್ನು ತ್ಯಜಿಸಿ ಮನಸ್ಸನ್ನು ತೆರೆದಿಟ್ಟಾಗ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ” ಎಂದು ಹೇಳಿದರು.



ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್‌ ವಿ ಮತ್ತು ಭಾಗ್ಯಶ್ರೀ ಬಿ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಬದಲಾದ ಪ್ರಶ್ನೆಪತ್ರಿಕೆಯ ಮಾದರಿ ಹಾಗೂ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪನ್ಯಾಸಕ ವೃಂದ ಹಾಗೂ ಉಪನ್ಯಾಸಕೇತರ ವೃಂದದವರು, ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಪರೀಕ್ಷಾ ಸ್ವಾಗತಿಸಿ,ದೀಪಕ್‌ ವಂದಿಸಿದರು. ಸಹನ ಮಳಿ ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top